ಮಹಾತ್ಮಾ ಗಾಂಧೀಜಿಯವರ ಹತ್ಯೆಯನ್ನು ಸಮರ್ಥಿಸಿ ಹಾಗೂ ಕೊಲೆಗಾರ ನಾಥೋರಾಮ್ ಗೋಡ್ಸೆಯನ್ನು ಒಲೈಸುವ ರೀತಿಯ ಟ್ವೀಟ್ ಮಾಡಿದ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ತಿರುಗಿಬಿದ್ದಿದ್ದಾರೆ.ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರುಗಡೆ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ನಳಿನ್ ಕುಮಾರ್ ಹೇಳಿಕೆ ದೇಶದ್ರೋಹಕ್ಕೆ ಸಮಾನವಾದ ಹೇಳಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಮೇಲೆ ಗೌರವ ವಿಲ್ಲದ ನಳಿನ್ ಕುಮಾರ್ ನಂತವರು