ಕಲಬುರಗಿ ಜಿಲ್ಲೆಯ ಒಟ್ಟು ಜನಸಂಖ್ಯೆಯಲ್ಲಿ 2 ವರ್ಷದೊಳಗಿನ ಕಿರಿಯ ಮಕ್ಕಳು ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧ್ಧರು, ಗರ್ಭಿಣಿಯರು ಹಾಗೂ ಇನ್ನಿತರ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರನ್ನು ಹೊರತುಪಡಿಸಿ 2605737 ಅರ್ಹ ವ್ಯಕ್ತಿಗಳಿಗೆ ಡಿಇಸಿ ಮಾತ್ರೆಗಳನ್ನು ನುಂಗಿಸುವ ಗುರಿ ಹೊಂದಲಾಗಿದೆ.