ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡು ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂದಿತರಿಂದ 5.15 ಲಕ್ಷ ರೂ. ಬೆಲೆಬಾಳುವ ಮೂರು ಕಾರುಗಳು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಚಿತ್ರದುರ್ಗ ಜಿಲ್ಲೆಯ ಸದ್ದಾಂ ಹುಸೇನ್ ಅಲಿಯಾಸ್ ತಬ್ರೇಜ್ ಅಲಿಯಾಸ್ ಸದ್ದಾಂ(30) ಬಂಧಿತ ಆರೋಪಿ.ದೊಡ್ಡಬೆಟ್ಟಹಳ್ಳಿ ನಿವಾಸಿ ಕಂಚಿ ರೆಡ್ಡಿಗಾರಿ ಜನಾರ್ಧನ್ ಎಂಬುವವರು ಕಳೆದ ನ.17ರಂದು ರಾತ್ರಿ 10 ಗಂಟೆ ಸುಮಾರಿಗೆ ತಮ್ಮ ಮನೆಯ ಮುಂಭಾಗದ ರಸ್ತೆಯಲ್ಲಿ ಮಾರುತಿ ಸುಜುಕಿ ಕಾರನ್ನು ನಿಲ್ಲಿಸಿ