ನವೆಂಬರ್ 22 ರಂದು ವಿಮಾನ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಸಚಿವರು ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಸೇರಿದಂತೆ ಕೇಂದ್ರ ವಿಮಾನಯಾನ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರದಮದಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾಡಳಿತ ಮತ್ತು ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅಧಿಕಾರಿಗಳು