ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭಾನುವಾರ ಶಿರಸಿಗೆ ತೆರಳಿದ ಅವರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಮೂರು ಪಟ್ಟಿಯಲ್ಲಿಯೂ ನನಗೆ ಟಿಕೆಟ್ ನೀಡಿಲ್ಲ. ಸಾಕಷ್ಟು ನೋವು ತಿಂದಿದ್ದೇನೆ. ಇದರಿಂದ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಬಂದಿದ್ದೇನೆ