ರಾಜ್ಯ ರಾಜಧಾನಿಯಲ್ಲಿ ಟ್ರಾಫಿಕ್ ನಿಯಮಗಳ ಸಂಬಂಧ ಕಟ್ಟುನಿಟ್ಟಿನ ಕ್ರಮಗಳಿವೆ. ಆದರೂ ಬೆಂಗಳೂರಲ್ಲಿ ನಿತ್ಯ ಸುಮಾರು 20 ಸಾವಿರ ಸವಾರರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಾರೆ. ಹೀಗೆ ನಿಯಮ ಉಲ್ಲಂಘಿಸಿದವರಿಗೆ ನೋಟಿಸ್ ಕೊಡೋದು ಸಂಚಾರ ಪೊಲೀಸ್ ಇಲಾಖೆಗೆ ದೊಡ್ಡ ತಲೆ ನೋವಾಗಿದೆ. ಈ ನಿಟ್ಟಿನಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಪ್ರಾಯೋಗಿಕವಾಗಿ ಯೋಜನೆಯೊಂದನ್ನು ಪ್ರಾರಂಭಿಸಿದ್ದಾರೆ. ಇದರ ಅಡಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಾಗಿ ವಾಹನ ಮಾಲೀಕರಿಗೆ SMS ಮೂಲಕ