ಚಿಕ್ಕಮಗಳೂರು : ನಮ್ಮ ಮೊದಲ ರಾಜಕೀಯ ವಿರೋಧಿ ಜೆಡಿಎಸ್ ಎಂದು ಅಮಿತ್ ಶಾ ಹೇಳಿದ್ದಾರೆ. ಹೀಗಿರುವಾಗ ಹೊಂದಾಣಿಕೆ ಎಲ್ಲಿಂದ? ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಕೂಡ ನಾವು ಯಾವುದೇ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಹೊಂದಾಣಿಕೆಯಾಗಿದ್ರೆ, ಹೆಚ್ಡಿಕೆ ವಿರುದ್ಧ ಯೋಗೀಶ್ವರ್ ಸ್ಪರ್ಧೆ ಮಾಡುತ್ತಿರಲಿಲ್ಲ. ನನ್ನ ವಿರುದ್ಧ ಜೆಡಿಎಸ್ ಅಭ್ಯರ್ಥಿ 32 ಸಾವಿರ ಮತ ತೆಗೆದುಕೊಂಡರು.