ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತಿಮ ಹಂತ ತಲುಪುತ್ತಿದ್ದಂತೆ, ಇತ್ತ ಪಕ್ಷವನ್ನು ಗೆಲ್ಲಿಸಿಕೊಳ್ಳಲು ಬೇಕಾದ ರಣತಂತ್ರಗಳನ್ನು ರೂಪಿಸಿಕೊಳ್ಳಲು ಎಐಸಿಸಿ ವೀಕ್ಷಕರ ಸಭೆ ನಡೆಯಿತು. ಬೆಂಗಳೂರಿನ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ರು. ಸಭೆಯ ಬಳಿಕ ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ‘ಎಐಸಿಸಿ ವೀಕ್ಷಕರ ಸಭೆ