ಬೆಂಗಳೂರು : ಮಳೆಯ ಅಭಾವದಿಂದ ರಾಜ್ಯದೆಲ್ಲೆಡೆ ಬರಗಾಲ ತಾಂಡವವಾಡುತ್ತಿದ್ದು, ಈ ಹಿನ್ನಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಮಳೆಗಾಗಿ ದೇವರ ಮೊರೆ ಹೋಗಿದೆ. ಅದಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿರುವ ಮಳೆದೇವ ಋಷ್ಯಶೃಂಗ ದೇವಾಲಯದಲ್ಲಿ ಪರ್ಜನ್ಯ ಹೋಮವನ್ನು ಮೈತ್ರಿ ಸರ್ಕಾರ ಆಯೋಜಿಸಿದೆ. ಸಚಿವರಾದ ಡಿ.ಕೆ. ಶಿವಕುಮಾರ್ ಹಾಗೂ ಪಿ.ಟಿ. ಪರಮೇಶ್ವರ್ ನಾಯ್ಕ್ ಮುಂದಾಳತ್ವದಲ್ಲಿ ಹೋಮ ನಡೆಯುತ್ತಿದೆ. ಇಂದು ಬೆಳಗ್ಗೆ 5.30ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ಈಗಾಗಲೇ ಆರಂಭಿಸಲಾಗಿದೆ. 40 ಪುರೋಹಿತರಿಂದ ಪೂಜಾ ವಿಧಿವಿಧಾನ