ಜುಲೈ 2ರಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ಟ್ವೀಟ್ ಮಾಡಿ ನ್ಯಾಯಮೂರ್ತಿ ಆರಾಧೆ ಕರ್ನಾಟಕ ಹೈಕೋರ್ಟ್ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ನ್ಯಾಯಮೂರ್ತಿ ಅವಸ್ಥಿ ಜುಲೈ 2ರಂದು ತಮ್ಮ 62ನೇ ಹುಟ್ಟುಹಬ್ಬಕ್ಕೂ ಮುನ್ನಾದಿನದಂದು ನಿವೃತ್ತರಾಗುತ್ತಾರೆ.