ಸಾರ್ವಜನಿಕ ಗಣೇಶೋತ್ಸವ ಮಂಟಪಗಳಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕೆಂಬ ಎಡಿಜಿಪಿ ಅಲೋಕ್ಕುಮಾರ್ ಹೇಳಿಕೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಎಡಿಜಿಪಿಯವರೇ ಯಾವ ದೇಶದಲ್ಲಿ ಇದ್ದೀವಿ ನಾವು? 75 ವರ್ಷ ಆಯ್ತು ಸ್ವಾತಂತ್ರ್ಯ ಸಿಕ್ಕಿ, ಸ್ವಾತಂತ್ರ್ಯ ನಮಗೆ ಸಿಗಬೇಕಾದ್ರೆ ತಿಲಕ್, ಸಾವರ್ಕರ್ ಕಾರಣ ಎಂಬುದು ನಿಮಗೆ ಗೊತ್ತಿಲ್ವಾ? ಎಲ್ಲದಕ್ಕೂ ಪರ್ಮಿಷನ್ ತಗೆದುಕೊಳ್ಳಬೇಕಾ? ಸಾವರ್ಕರ್ ತಮ್ಮ ಆಯುಷ್ಯದಲ್ಲಿ ಅರ್ಧ