ನವೆಂಬರ್ 18 ಮತ್ತು 19ರಂದು ವಿವಿಧ ನಿಗಮ ಮಂಡಳಿಗಳಿಗೆ ನಡೆಯಲಿರುವ ನೇಮಕಾತಿ ಪರೀಕ್ಷೆಗಳಿಗೆ ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ವಸ್ತ್ರ ಧರಿಸಿಕೊಂಡು ಬರುವಂತಿಲ್ಲ ಎಂಬ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುತ್ತೋಲೆ ಮುಸ್ಲಿಂ ಮಹಿಳಾ ಅಭ್ಯರ್ಥಿಗಳಲ್ಲಿ ಗೊಂದಲ ಮೂಡಿಸಿದೆ.