ಮಂಡ್ಯ ವಿಧಾನಸಭೆ ಕ್ಷೇತ್ರದ ಶಾಸಕ ಅಂಬರೀಶ್ ಅವರಿಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಅವರು ಸಹ ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಇಗ ಏನೋ ಆಯ್ತು ಎಂದು ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಪುನರ್ರಚನೆಯಾಗಬೇಕು ಎಂದು ಬೇಡಿಕೆ ಇತ್ತು. ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟವನ್ನು ವಿಸ್ತರಿಸಲಾಗಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಯಾರಿಗೆ ಬಿಡಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಟ್ಟ