ಬೆಂಗಳೂರು: ಮೊನ್ನೆ ನಿಧನರಾದ ಹಿರಿಯ ನಟ, ರಾಜಕಾರಣಿ ಅಂಬರೀಶ್ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.ಸಾವಿರಾರು ಅಭಿಮಾನಿಗಳ ಜೈಕಾರದ ನಡುವೆ ಕಂಠೀರವ ಸ್ಟುಡಿಯೋಕ್ಕೆ ಮೆರವಣಿಗೆ ಮೂಲಕ ಬಂದ ಅಂಬರೀಶ್ ಪಾರ್ಥಿವ ಶರೀರಕ್ಕೆ ಗೌಡರ ಸಂಪ್ರದಾಯದಂತೆ ವಿಧಿವಿಧಾನ ನೆರವೇರಿಸಲಾಯಿತು.ಇದಕ್ಕೂ ಮೊದಲು ಸರ್ಕಾರದ ಪರವಾಗಿ ಸಿಎಂ ಕುಮಾರಸ್ವಾಮಿ, ಎಚ್ ಡಿ ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಪರವಾಗಿ ಕೆಸಿ ವೇಣುಗೋಪಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಆದಿಚುಂಚನಗಿರಿ