ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿಕೆ ಹಿಟ್ ಆಂಡ್ ರನ್ ಕೇಸ್ನಂತೆ. ಮನಬಂದಂತೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಭಿಕ್ಷೆ ಕೊಟ್ಟಂತೆ ಮಾತನಾಡಬಾರದು. ಐದು ವರ್ಷಗಳಲ್ಲಿ ಕೇಂದ್ರ ಸರಕಾರ ರಾಜ್ಯಕ್ಕೆ 1.87 ಲಕ್ಷ ಕೋಟಿ ಹಣ ನೀಡಬೇಕು ಎಂದರು. ರಾಜ್ಯಕ್ಕೆ ಕೇಂದ್ರ ಸರಕಾರ ನೀಡುತ್ತಿರುವುದು ಅವರ ಹಣವಲ್ಲ. ರಾಜ್ಯದಿಂದ ಸಂಗ್ರಹಿಸಿದ