ಕುಲಗೆಟ್ಟ ಸರಕಾರ ಬದಲಿಸಲು ಬಿಜೆಪಿ ಪರಿವರ್ತನಾ ಯಾತ್ರೆಯನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನವ ಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ಕೇಂದ್ರ ಸರಕಾರ 1 ಲಕ್ಷ 30 ಸಾವಿರ ಕೋಟಿ ರೂಪಾಯಿಗಳ ಅನುದಾನ ನೀಡಿದೆ. ಆದರೆ, ಕೇಂದ್ರದಿಂದ ಬಿಡುಗಡೆಯಾದ ಹಣ ಜನರಿಗೆ ತಲುಪುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಕಾಂಗ್ರೆಸ್ ಪಕ್ಷ ಲೂಟಿ