ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋತಿರುವುದಕ್ಕೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ನಾಯಕರ ವಿರುದ್ಧ ಗರಂ ಆಗಿದ್ದಾರೆ.ಬಿಜೆಪಿ ಭದ್ರಕೋಟೆಯಾಗಿದ್ದ ಜಯನಗರದಲ್ಲೇ ಪಕ್ಷ ಸೋತಿರುವುದು ಯಾಕೆ? ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಜನಾದೇಶವಿದ್ದರೂ ಆರ್ ಆರ್ ನಗರ ಮತ್ತು ಜಯನಗರದಲ್ಲಿ ಕಾಂಗ್ರೆಸ್ ಜಯಗಳಿಸಿರುವುದು ಹೇಗೆ? ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.ಕಾರ್ಯಕರ್ತರು, ಸ್ಥಳೀಯ ನಾಯಕರು ಸರಿಯಾಗಿ ಕೆಲಸ ಮಾಡಲಿಲ್ಲವೇ ಎಂದು ಅಮಿತ್ ಶಾ ರಾಜ್ಯ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ