ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿ ಬಂದ ಗಿರಾಕಿಗಳು ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸರಕಾರ ನುಡಿದಂತೆ ನಡೆದ ಸರಕಾರ. ರೈತರ ಪರ, ಬಡವರ, ದೀನ ದಲಿತರ, ಶೋಷಿತರ ಪರವಾದ ಸರಕಾರವಾಗಿದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಆಟ ಕರ್ನಾಟಕದಲ್ಲಿ ನಡೆಯೋಲ್ಲ.