ಬೆಂಗಳೂರು : ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿ ಸುಮಾರು 8 ಕೋಟಿ ಸೀಜ್ ಮಾಡಿದೆ. ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ನಾಯಕರು ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿರುವುದರ ಹಿಂದಿನ ಉದ್ದೇಶವೇನು ಎಂಬುದಾಗಿ ಪ್ರಶ್ನಿಸಿದೆ. ನಾ ಖಾವುಂಗಾ, ನಾ ಖಾನೆದುಂಗಾ