ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರುವ ಏ.1ಕ್ಕೆ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಯಿದೆ. ಅವರು ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಆಗಮಿಸುತ್ತಿದ್ದು, ಇದೇ ವೇಳೆ ಸಂಪುಟ ಕಸರತ್ತಿನ ಬಗ್ಗೆಯೂ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಯುವುದೇ ಎಂಬುದು ಕುತೂಹಲಕರವಾಗಿದೆ.ಕೇಂದ್ರದ ಸಹಕಾರ ಇಲಾಖೆಯ ಹೊಣೆಯನ್ನೂ ಹೊತ್ತಿರುವ ಅವರು ರಾಜ್ಯ ಸಹಕಾರ ಇಲಾಖೆಯ ಸಮಾರಂಭಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜತೆಗೆ ರಾಜ್ಯದ ಗೃಹ ಇಲಾಖೆಯೂ ಕಾರ್ಯಕ್ರಮ ಆಯೋಜಿಸುವ ಸಂಭವವಿದೆ. ಇದಲ್ಲದೆ ಸುತ್ತೂರು ಮತ್ತು