ಹುಬ್ಬಳ್ಳಿ : ಟಿಕೆಟ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ರೋಡ್ ಶೋ ವೇಳೆ ಮಾತನಾಡಿದ ಅವರು, ಶೆಟ್ಟರ್ ಹೋಗಿದ್ರಿಂದ ಪಕ್ಷಕ್ಕೇನು ನಷ್ಟವಿಲ್ಲ. ಸ್ವತಃ ಶೆಟ್ಟರ್ ಸೋಲ್ತಾರೆ. ಬಿಜೆಪಿ ತನ್ನದೇ ಆದ ಮತ ಬ್ಯಾಂಕ್ ಹೊಂದಿದೆ. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯವಾಗಿದೆ. ಶೆಟ್ಟರ್ ಒಬ್ಬರನ್ನು ಮಾತ್ರವಲ್ಲ, ಅನೇಕರನ್ನು ಕೈಬಿಡಲಾಗಿದೆ.