ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳವಾರ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದೊಳಗೆ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಅಮಿತ್ ಶಾ ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ. ಜನವರಿ 28ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿರುವುದರಿಂದ ಸಮಾರಂಭದ ಪೂರ್ವಸಿದ್ದತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬುಧವಾರ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಅವರು ಭಾಗವಹಿಸಲಿದ್ದಾರೆ. ತಾಜಾ ಸುದ್ದಿಗಳನ್ನು