ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಫೆಬ್ರುವರಿ 18ರಿಂದ 20ರವರೆಗೆ ಮೂರು ದಿನಗಳ ಕಾಲ ಕರವಾಳಿ ಜಿಲ್ಲೆಗಳ ಪ್ರವಾಸ ಹಮ್ಮಿಕೊಂಡಿದ್ದಾರೆ.ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿರುವ ಅಮಿತ್ ಶಾ ಅವರು ಬಿಡುವಿಲ್ಲದಂತೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮೂರು ಜಿಲ್ಲೆಗಳ ಮುಖಂಡರೊಂದಿಗೆ ಚುನಾವಣೆ ಸಂಬಂಧ ಚರ್ಚಿಸಲಿದ್ದಾರೆ. ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಯಲಿದೆ.ಪ್ರವಾಸದ ವೇಳೆ ಕುಕ್ಕೆ ಸುಬ್ರಮಣ್ಯ ಹಾಗೂ ಉಡುಪಿ ಶ್ರೀಕೃಷ್ಣ