ಚಿಕ್ಕಬಳ್ಳಾಪುರ : ಇಂದು ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 1ರಂದು ನಾಳೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಶ್ರೀ ಸತ್ಯಸಾಯಿ ಲೋಕಸೇವಾ ಶಿಕ್ಷಣ ಸಂಸ್ಥೆಗಳ ಸತ್ಯಸಾಯಿ ಗ್ರಾಮಕ್ಕೆ ಭೇಟಿ ನೀಡಿಲಿದ್ದು,ಅಮಿತ್ ಶಾ ಆಗಮನಕ್ಕಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸತ್ಯಸಾಯಿ ಗ್ರಾಮದ ಸರಳ ಮೆಮೋರಿಯಲ್ ಆಸ್ಪತ್ರೆಯ ಪಕ್ಕದಲ್ಲಿಯೇ 400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಹಾಗೂ ಉಚಿತ ವೈದ್ಯಕೀಯ ಶಿಕ್ಷಣಕ್ಕೆ ನೆರವಾಗುವ ನೂತನ ಕಟ್ಟಡ