ಬಿಜೆಪಿಯ ಚುನಾವಣಾ ಚಾಣಕ್ಯ ಎಂದೇ ಕರೆಯಲ್ಪಡುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂಬರುವ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ಉದ್ದೇಶದಿಂದ ಇಂದು ರಾಜ್ಯದ ಬಳ್ಳಾರಿ ಜಿಲ್ಲೆ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿರುವ ಅಮಿತ್ ಶಾ ಅವರು ಸಂಜೆ ಬೆಂಗಳೂರಿನಲ್ಲಿ ವಿವಿಧ ಕ್ಷೇತ್ರಗಳ ಆಯ್ದ ಪ್ರಮುಖರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ರಾತ್ರಿ ಬೆಂಗಳೂರಿನಲ್ಲಿ ಪಕ್ಷ ಸಂಘಟನೆ ಕುರಿತು ಪ್ರಮುಖ