ಮಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಪ್ರಚಾರಕ್ಕಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸೋಮವಾರ (ಇಂದು) ಮಂಗಳೂರಿಗೆ ಆಗಮಿಸಲಿದ್ದಾರೆ. ಸೋಮವಾರ ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಂತರ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಳಗ್ಗೆ ಅಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ನಂತರ ಕುಲ್ಕುಂದದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ನವಶಕ್ತಿ ಸಂಗಮದಲ್ಲಿ