ಮುಂಬೈ : ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನದಿಂದ ಹಿಂದೆ ಸರಿಯೂ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶವ್ಯಾಪಿ ಭಾರೀ ವಿರೋಧ ವ್ಯಕ್ತವಾಗಿದ್ದು, ಹಿಂಸಾಚಾರ, ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಸಿಎಎ ಅಸಂವಿಧಾನಿಕ ಅದನ್ನು ಹಿಂಪಡೆಯುವಂತೆ ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದು, ಇದನ್ನು ಮೋದಿ ಸರ್ಕಾರ ಹಿಂಪಡೆಯುವಂತೆ ಮಾಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಈ ಎಲ್ಲಾ ವಿರೋಧದ ನಡನೆಯೂ