ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಒಂದು ವೇಳೆ ಅತಂತ್ರ ಸ್ಥಿತಿ ನಿರ್ಮಾಣವಾದರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಯಾವುದಾದರೊಂದು ಪಕ್ಷ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ. ಈ ಬಗ್ಗೆ ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಿದೆ.ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಮಗೆ ಜೆಡಿಎಸ್ ನ ಸಹವಾಸವೇ ಬೇಡ. ಯಾವುದೇ ಕಾರಣಕ್ಕೂ ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಯೋಚನೆಯಿಲ್ಲ.