ಬೆಂಗಳೂರು: ಬಾದಾಮಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎದುರಾಳಿಯಾಗಿ ಬಿಜೆಪಿಯಿಂದ ಬಿ ಶ್ರೀರಾಮುಲು ಅವರಿಗೇ ಟಿಕೆಟ್ ನೀಡಿದ್ದೇಕೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಹಿರಂಗಪಡಿಸಿದ್ದಾರೆ.ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಸೋಲಿನ ಭೀತಿ ಎದುರಾಗಿದೆ. ಅದಕ್ಕೇ ಬಾದಾಮಿಯಲ್ಲಿ ಎರಡನೇ ಕ್ಷೇತ್ರವಾಗಿ ಕಣಕ್ಕಿಳಿಯುತ್ತಿದ್ದಾರೆ. ಇದೇ ಕಾರಣಕ್ಕೆ ಬಾದಾಮಿಯಲ್ಲೂ ಅವರನ್ನು ಸೋಲಿಸಲು ಶ್ರೀರಾಮುಲು ಅವರನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಇಲ್ಲೂ ಸಿಎಂ ಗೆ ಸೋಲೇ ಗತಿ