ಬೆಂಗಳೂರು: ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದ ಜತೆಗೂ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.ಅತಂತ್ರ ಸ್ಥಿತಿ ನಿರ್ಮಾಣವಾದಲ್ಲಿ ಬಿಜೆಪಿ ಜೆಡಿಎಸ್ ಜತೆ ಸೇರಿ ಸರ್ಕಾರ ರಚಿಸಬಹುದು ಎಂಬ ಊಹಾಪೋಹಗಳಿಗೆ ಅವರು ಈ ಮೂಲಕ ತೆರೆ ಎಳೆದಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ ಯಾವುದೇ ಪಕ್ಷವೂ ಬಹುಮತ ಗಳಿಸಲಾರದು. ಹಾಗಿದ್ದಾಗ ಈ ಎರಡೂ ಪಕ್ಷಗಳು ಜೆಡಿಎಸ್