ಬೆಂಗಳೂರು: ಇತ್ತೀಚೆಗೆ ಮೈಸೂರಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಳ್ಳಾರಿ ಗಣಿ ದೊರೆ ಜನಾರ್ಧನ ರೆಡ್ಡಿ ಬಗ್ಗೆ ನೀಡಿದ ಹೇಳಿಕೆಯೊಂದು ಹೊಸ ತಲೆನೋವು ಸೃಷ್ಟಿಸಿದೆ.ಗಣಿ ಅಕ್ರಮದಿಂದಾಗಿ ಶಿಕ್ಷೆಗೊಳಗಾಗಿದ್ದ ಬಿಜೆಪಿ ನಾಯಕ ಜನಾರ್ಧನ ರೆಡ್ಡಿಯನ್ನು ಮರಳಿ ಪಕ್ಷಕ್ಕೆ ಕರೆಸಿಕೊಳ್ಳುವ ಬಗ್ಗೆ ಶಾ ಅವರಲ್ಲಿ ಪ್ರಶ್ನಿಸಿದಾಗ, ಜನಾರ್ಧನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದಿದ್ದರು. ಇದೀಗ ಜನಾರ್ಧನ ರೆಡ್ಡಿ ಅಸಮಾಧಾನಕ್ಕೆ ಕಾರಣವಾಗಿದೆ.ಹೇಗಾದರೂ ಈ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಸೋಲುಣಿಸುವ