ಬೆಂಗಳೂರು : ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ತುಮಕೂರು ಸೇರಿದಂತೆ ಒಂಬತ್ತು ಜಿಲ್ಲೆಗಳ 503.25 ಕೋಟಿ ರು.ಮೊತ್ತದ ಕಾಮಗಾರಿಗಳಿಗೆ ಪೌರಾಡಳಿತ ಇಲಾಖೆ ಶುಕ್ರವಾರ ಅನುಮೋದನೆ ನೀಡಿದೆ. ತನ್ಮೂಲಕ ಈ ಯೋಜನೆಯಡಿ ಇದುವರೆಗೆ ರಾಜ್ಯದ 291 ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 2993 ಕೋಟಿ ರು.ಗಳ ಕಾಮಗಾರಿಗಳಿಗೆ ಅನುಮೋದನೆ ದೊರೆತಂತಾಗಿದೆ.ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯ 3885 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ