ಕರ್ನಾಟಕ ರಾಜ್ಯ ಸರ್ಕಾರದಿಂದ ವಿಧಾನಸಭಾ ಅಧಿವೇಶನದ ಕಲಾಪದ ವೇಳೆಯಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.ಸರಕಾರದ ಕ್ರಮ ಖಂಡಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮಕ್ಕೆ ಅಧಿವೇಶನದಲ್ಲಿ ನಿರ್ಬಂಧ ಹೇರಿರುವುದು ಖಂಡನೀಯ. ಮಾಧ್ಯಮಗಳು ಸಾರ್ವಜನಿಕ ಹಾಗೂ ಸರ್ಕಾರದ ನಡುವಿನ ಕೊಂಡಿಯಂತೆ ಕಾರ್ಯನಿರ್ವಹಿಸುತ್ತವೆ. ಮಾಧ್ಯಮಗಳಿಗೆ ಈ ರೀತಿ ನಿರ್ಬಂಧ ಹೇರಿರುವುದು