ಬೆಂಗಳೂರಿನ ಹೆಬ್ಬಾಳ ಸಮೀಪ ನಿನ್ನೆ ಅಪಘಾತ ಸಂಭವಿಸಿ ತಾಯಿ-ಮಗು ಮೃತಪಟ್ಟಿದ್ದರು. ನಂತರ ಮೆಟ್ರೋ ಘಟನೆಯ ಸಂಭಾವ್ಯ ಕಾರಣಗಳು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಅಧಿಕೃತ ಹೇಳಿಕೆ ಹೊರಡಿಸಿತು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು ಘಟನೆ ನಡೆದು ನಾಲ್ಕು ಗಂಟೆಗಳ ನಂತರ ಸ್ಥಳಕ್ಕೆ ಭೇಟಿ ನೀಡಿದರು. ಸಂಬಂಧಿಸಿದ ಗುತ್ತಿಗೆದಾರರು ಮತ್ತು ಎಂಜಿನಿಯರ್ಗಳಿಗೆ ನೊಟೀಸ್ ಜಾರಿ ಮಾಡಲಾಗುವುದು. ಆಂತರಿಕ ತಾಂತ್ರಿಕ ಸಮಿತಿಯಿಂದ ಈ ಸಂಬಂಧ ತನಿಖೆ ನಡೆಸಲಾಗುವುದು