ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ರಾಜ್ಯದ ಅಭಿವೃದ್ಧಿಗಾಗಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ವಿಕಾಸ ಪರ್ವ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಅಧಿಕಾರ ನಡೆಸುತ್ತಿವೆ. ಆದರೆ, ರಾಜ್ಯದ ಜನತೆಯ ಕಷ್ಟ ದೂರವಾಗಿಲ್ಲ. ನನಗೆ ಮುಖ್ಯಮಂತ್ರಿ ಆಗಬೇಕು ಎಂಬುದು ಮುಖ್ಯವಲ್ಲ. ರಾಜ್ಯದ ಜನರ ಕಷ್ಟ ತೀರಿಸುವುದು ಮುಖ್ಯವಾಗಿದೆ ಎಂದಿದ್ದಾರೆ. ಜೆಡಿಎಸ್ ಅಧಿಕಾರಕ್ಕೆ