ಹುಬ್ಬಳ್ಳಿ: ನೂಲ್ವಿ ಗ್ರಾಮದಲ್ಲಿ ನಡೆದ ಕೊಲೆಯ ರಹಸ್ಯವನ್ನು ಭೇದಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊನ್ನೆಯಷ್ಟೇ ನೂಲ್ವಿ ಗ್ರಾಮದ ಹೊರವಲಯದಲ್ಲಿ ನಡೆದ ಭೀಕರ ಕೊಲೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ತಮ್ಮನನ್ನೇ ಅಕ್ಕ ಕೊಲೆ ಮಾಡಿರುವುದು ಪೊಲೀಸ್ ತನಿಖೆ ಮೂಲಕ ಹೊರ ಬಂದಿದೆ. ಕಳೆದ ಎರಡೂ ದಿನಗಳ ಹಿಂದೆ ಶಂಭುಲಿಂಗ ಕಮಡೊಳ್ಳಿ(35) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ