ಬೆಂಗಳೂರು : ಹುಣಸೂರು ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ಮತದಾರರನ್ನು ಸೆಳೆಯಲು ಹೆಚ್.ವಿಶ್ವನಾಥ್ ಹೊಸ ತಂತ್ರ ರೂಪಿಸಿದ್ದು, ಮೈಸೂರು ವಿಭಜನೆ ಆಗಬೇಕು ಎಂದು ಇದೀಗ ಅವರು ಆಗ್ರಹಿಸಿದ್ದಾರೆ. ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಹುಣಸೂರು ಕ್ಷೇತ್ರದ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರು ಮೈಸೂರು ವಿಭಜನೆ ಮಾಡಿ, ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವಂತೆ ಸಿಎಂಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೂರು ಸೇರಿ 6