ಬೆಂಗಳೂರು : ಈಗಲ್ ಟನ್ ರೆಸಾರ್ಟ್ ನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ `ರೌಡಿ ಶಾಸಕ ಕಂಪ್ಲಿ ಗಣೇಶ್ ಅವರನ್ನು ಈವರೆಗೂ ಬಂಧಿಸದಿರುವುದಕ್ಕೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ. ಸೋಮವಾರ ಮಧ್ಯಾಹ್ನದವರೆಗೂ ರೆಸಾರ್ಟ್ ನಲ್ಲಿದ್ದ ಗಣೇಶ್ ತನ್ನ ವಿರುದ್ಧ ಎಫ್.ಐ.ಆರ್ ದಾಖಲಾಗುತ್ತಿದ್ದಂತೆ ದಿಢೀರ್ ಕಣ್ಮರೆಯಾಗಿದ್ದಾರೆ. ಐಪಿಸಿ ಸೆಕ್ಷನ್ 323(ಹಲ್ಲೆ), 324(ದೊಣ್ಣೆಯಿಂದ ಹಲ್ಲೆ), 307(ಕೊಲೆ ಯತ್ನ), 504(ಉದ್ದೇಶ ಪೂರ್ವಕ ಶಾಂತಿ ಕದಡುವುದು) 506(ಜೀವ ಬೆದರಿಕೆ) ಅಡಿ ಬಿಡದಿ ಠಾಣೆಯಲ್ಲಿ