ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಧಾನದ ಹಿನ್ನೆಲೆಯಲ್ಲಿ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್ ಮಂಗಳವಾರ ಪ್ರವಾಸೋದ್ಯಮಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ವಿಧಾನಸೌಧ ಪಕ್ಕದ ವಿಕಾಸ ಸೌಧಕ್ಕೆ ಸ್ಥಳಾಂತರಗೊಂಡಿರುವ ಪ್ರವಾಸೋದ್ಯಮ ಕಚೇರಿಯಲ್ಲಿ ಆನಂದ್ ಸಿಂಗ್ ಅಧಿಕಾರ ಸ್ವೀಕರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ನನ್ನ ಮನವಿ ಸಲ್ಲಿಸಿದ್ದೇನೆ. ಸಿಎಂ ಕೂಡ ವರಿಷ್ಠರ ಜೊತೆ ಚರ್ಚಿಸ್ತೇನೆ ಎಂದಿದ್ದಾರೆ. ಹೀಗಾಗಿ ಪಕ್ಷ ಹಾಗೂ ಅವರ ಮಾತಿಗೆ ಬೆಲೆ