ಮಾಜಿ ಸಚಿವ ಆನಂದ ಅಸ್ನೋಟಿಕರ್ ಅವರು ಜನವರಿ 15ರಂದು ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಆನಂದ ಅಸ್ನೋಟಿಕರ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮಂಜುನಾಥ ಗೌಡ ಅವರು ಕೂಡ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತೀರ್ಥಹಳ್ಳಿಯಿಂದ