ಕಾರವಾರ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಮ್ಮು-ಕಾಶ್ಮೀರ, ರಾಮಮಂದಿರ ಸೇರಿದಂತೆ ಅನೇಕ ವಿಚಾರದಲ್ಲಿ ಕೇಂದ್ರದ ನಡೆಯನ್ನು ಖಂಡಿಸಿ ಇತ್ತೀಚೆಗೆ ದಕ್ಷಿಣ ಕನ್ನಡದ ದಕ್ಷ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಮ್ಮ ವೃತ್ತಿಗೆ ರಾಜೀನಾಮೆ ನೀಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಅನಂತ ಕುಮಾರ್ ಹೆಗಡೆ, ಐಎಎಸ್ ಅಧಿಕಾರಿ ಸೆಂಥಿಲ್ ಮಾಡಬೇಕಾದ