ಬೆಂಗಳೂರು-ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆಗಳ ವಿಚಾರವಾಗಿ ನಗರದಲ್ಲಿ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.ಮೊದಲೇ ರಾಜಕಾರಣಿಗಳು ಅಂದ್ರೆ ಜನ ನಂಬಲ್ಲ, ಅಂಥ ಪರಿಸ್ಥಿತಿ ಇದೆ.ಯಾರೇ ಇದ್ರೂ ನಮ್ಮ ಹೇಳಿಕೆ ಗಂಭೀರವಾಗಿರಬೇಕು.ಸಮಾಜ ಒಪ್ಪುವಂತೆ ಮಾತು ಇರಬೇಕು.ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗಳನ್ನು ನಾನೂ ಗಮನಿಸಿದ್ದೇನೆ.ನಾನು ಅವರ ಜತೆಗೂ ಇದರ ಬಗ್ಗೆ ಮಾತಾಡ್ತೇನೆ.ಅನಂತ್ ಕುಮಾರ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ.ಅವರು ಹೇಳಿರೋದೆಲ್ಲ ಅವರ ವೈಯಕ್ತಿಕ ಅಭಿಪ್ರಾಯಗಳು ಇದರ ಬಗ್ಗೆ ಅವರ ಜತೆ ವೈಯಕ್ತಿಕವಾಗಿ ಮಾತಾಡ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.