ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗಿಳಿದಿದ್ದಾರೆ. ಬೆಂಗಳೂರಿನ ಫ್ರೀಂಡಂಪಾರ್ಕ್`ನಲ್ಲಿ 5 ಸಾವಿರಕ್ಕೂ ಅಧಿಕ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಕಾರ್ಯಕರ್ತೆಯರ ಭೇಟಿಗೆ ಬಂದಿದ್ದ ಸಚಿವೆ ಉಮಾಶ್ರೀ ಕಣ್ಣೊರೆಸುವ ತಂತ್ರ ಮಾಡಿದ್ದಾರೆ ಎಂದು ಕಾರ್ಯಕರ್ತೆಯರು ಆರೋಪಿಸಿದ್ದಾರೆ. ದೂರದ ಊರುಗಳಿಂದ ಇಲ್ಲಿಗೆ ಬಂದಿರುವ ಕಾರ್ಯಕರ್ತೆಯರು ಕುಡಿಯುವ ನೀರು, ಶೌಚಾಲಯ ಸೌಲಭ್ಯವಿಲ್ಲದೆ ರಾತ್ರಿಯಿಡೀ ಪರಿತಪಿಸಿದ್ದಾರೆ.ರಾತ್ರಿಯಿಡೀ ತಮ್ಮ ಪುಟ್ಟ ಮಕ್ಕಳ ಜೊತೆ ರಸ್ತೆಯಲ್ಲೇ ಮಲಗಿ ಕಾರ್ಯಕರ್ತೆಯರು