ಅಂಗನವಾಡಿ ಮೇಲ್ಛಾವಣಿ ಪ್ಲಾಸ್ಟರ್ ಕುಸಿತವಾಗಿ ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮರಕಲ್ ಗ್ರಾಮದಲ್ಲಿ ನಡೆದಿದೆ. 10 ತಿಂಗಳ ಮಗು ಕೀರ್ತಿ ಸೇರಿದಂತೆ ಮೂವರು ಮಕ್ಕಳಿಗೆ ಗಾಯವಾಗಿದೆ. ಗಾಯಾಳು ಕೀರ್ತಿಗೆ ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದ್ರಧನುಷ್ 5.O ಲಸಿಕೆಗೆ ಚಾಲನೆ ನೀಡಿದ್ದರು. ಮರಕಲ್ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ