ರಾಜ್ಯ ಸರಕಾರ ಬಡವರಿಗೆಂದು ಉಚಿತವಾಗಿ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿ ಖಾಸಗಿ ಅಂಗಡಿಗಳಲ್ಲಿ ಮಾರಾಟವಾಗುತ್ತಿರುವ ಸಂಗತಿ ಜನಸಾಮಾನ್ಯರ ಗಮನಕ್ಕೆ ಬಂದಿರಬಹುದು. ಅದಕ್ಕೆ ಮಂಗಳೂರಿನಲ್ಲಿ ತಾಜಾ ಉದಾಹರಣೆಯೊಂದು ಬೆಳಿಗ್ಗೆ ಪತ್ತೆಯಾಗಿದೆ.ಮಂಗಳೂರಿನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಲಾರಿ ಕೆಎ -19- ಎಎ- 5508 ಇದರಲ್ಲಿ ಅಕ್ಕಿಯನ್ನು ಖಾಸಗಿ ಮಳಿಗೆಯಲ್ಲಿ ಮಾರಾಟ ಮಾಡಲು ತಯಾರಿ ನಡೆದಿತ್ತು. ಈ ಬಗ್ಗೆ ಸುಳಿವರಿತ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ದಿವಾಕರ್ ಪಾಂಡೇಶ್ವರ ಮತ್ತು ಇತರರು ಲಾರಿಯನ್ನು