ಸಂವಿಧಾನ ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ್ದ ಅಣ್ಣಾ ಹಜಾರೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ಸಂವಿಧಾನ ಅತ್ಯುತ್ತಮವಾಗಿದೆ. ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕು ನೀಡಿದೆ ಎಂದು ತಿಳಿಸಿದ್ದಾರೆ. ಕೃಷಿ ಕ್ಷೇತ್ರದ ಬಿಕ್ಕಟ್ಟು ಪರಿಹರಿಸುವಲ್ಲಿ ಸರ್ಕಾರಗಳು ವಿಫಲವಾಗಿದ್ದು, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ನೀಡುವುದು ಹಾಗೂ ರೈತರ ಬೆಳೆಗಳಿಗೆ ವೈಜ್ಞಾನಿಕ