ಬೆಂಗಳೂರಿನ ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ನಡೆದಿದೆ. ಬೆಂಗಳೂರಿನ ಸಾರಕ್ಕಿ ಬಳಿ ವಿವಾಹಿತ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದ್ದು, ಮಹಿಳೆ ಬಲಗಣ್ಣಿಗೆ ಗಂಭೀರ ಗಾಯ ಆಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವಾಹಿತ ಮಹಿಳೆಯನ್ನು ಪ್ರೀತಿಸುತ್ತಿದ್ದ ಆರೋಪಿ ಅಹ್ಮದ್, ಮದುವೆಯಾಗುವಂತೆ ದುಂಬಾಲು ಬಿದ್ದಿದ್ದ. ಇದಕ್ಕೆ ಒಪ್ಪದಿದ್ದಾಗ ಆರೋಪಿ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಆ್ಯಸಿಡ್ ದಾಳಿಯಿಂದ