ಬೆಳಗಾವಿ : ಹುಕ್ಕೇರಿ ಮತಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಬಯಸಿದ್ದ ಮಾಜಿ ಸಚಿವ ಶಶಿಕಾಂತ್ ನಾಯ್ಕ್ ಬಿಜೆಪಿಗೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ. ಕತ್ತಿ ಕುಟುಂಬದ ಕಿರುಕುಳಕ್ಕೆ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಜಿ ಸಚಿವ ಶಶಿಕಾಂತ್ ನಾಯ್ಕ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಇಪ್ಪತ್ತು ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡುತ್ತ ಬಂದಿದ್ದೇನೆ. ಜಿಲ್ಲೆಯಲ್ಲಿ ಬಿಜೆಪಿಯನ್ನು ಹಳ್ಳಿಮಟ್ಟದಿಂದ ಬೆಳೆಸಲು ಬಾಬಾಗೌಡ ಪಾಟೀಲ್ ಜೊತೆ ಕೆಲಸ ಮಾಡಿದ್ದೇನೆ.ಕೇವಲ