ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಬೆಳಗೆರೆ ಮಧ್ಯಂತರ ಜಾಮೀನು ಪಡೆದುಕೊಂಡ ಬೆನ್ನಲ್ಲೇ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆರೆಸ್ಟ್ ವಾರಂಟ್ ಜಾರಿ ಮಾಡಿದೆ. ಕೂಡಲೇ ರವಿ ಬೆಳಗೆರೆಯನ್ನು ದಸ್ತಗಿರಿ ಮಾಡಿ ಹಾಜರುಪಡಿಸುವಂತೆ ಕೋರ್ಟ್ ಸಂಜಯನಗರ ಪೊಲೀಸರಿಗೆ ಸೂಚನೆ ನೀಡಿದೆ. ಸುಮಾರು ಏಳು ವರ್ಷಗಳ ಹಿಂದೆ ಬೆಳಗೆರೆ ವಿರುದ್ಧ ದಾಖಲಾಗಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆರೆಸ್ಟ್ ವಾರಂಟ್ ಅನ್ನು ಜಾರಿ ಮಾಡಿದೆ. ಹಾಯ್