ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಹಲವು ಪಾಲಿಕೆ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಬಾಗಿಯಾಗಿದ್ದಾರೆಂದು ಎನ್ ಆರ್ ರಮೇಶ್ ಆರೋಪ ಮಾಡಿದ್ದಾರೆ.ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ 312 ಅಕ್ರಮ ಮಳಿಗೆಗಳ ನಿರ್ಮಾಣ,ಮಳಿಗೆಗಳನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿ ಹತ್ತಾರು ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ.ಹಳೆಯ ಕಟ್ಟಡವನ್ನು ತೆರವುಗೊಳಿಸಿ, BBMP ಮತ್ತು BDA ದಿಂದ ನಿರ್ಮಾಣ ವಾಗಿದ್ದ ವಾಣಿಜ್ಯ ಸಂಕೀರ್ಣ, ಪುಟ್ಟಣ್ಣ ಚಿತ್ರಮಂದಿರವಿದ್ದ ಜಾಗದಲ್ಲಿ ಹೊಸ ವಾಣಿಜ್ಯ ಕಟ್ಟಡವನ್ನು ನಿರ್ಮಿಸಲಾಗಿದೆ.